ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಧೋನಿ ರಾಜೀನಾಮೆ: ರವೀಂದ್ರ ಜಡೇಜಾ ಹೊಸ ನಾಯಕ !

Prasthutha|

ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದು,  ರವೀಂದ್ರ ಜಡೇಜಾ ಸಿಎಸ್ ಕೆ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ.

- Advertisement -

ಈ ವಿಚಾರವನ್ನು ಸ್ವತಃ ಸಿಎಸ್ ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ. 2012 ರಿಂದ ಚೆನ್ನೈ ಸೂಪರ್ ಕಿಂಗ್ಸ್ ನ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಸಿಎಸ್ ಕೆಯನ್ನು ಮುನ್ನಡೆಸುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಆವೃತ್ತಿಯಲ್ಲಿ ಮತ್ತು ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ ಎಂದು ಸಿಎಸ್ ಕೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಎಂಎಸ್ ಧೋನಿ ಈ ಸೀಸನ್ ನಲ್ಲಿ ಆಡಿದ ನಂತರ ಮುಂದಿನ ಸೀಸನ್ನಲ್ಲಿ ನಾಯಕತ್ವ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಧೋನಿ ಸಿಎಸ್ಕೆ ನಾಯಕತ್ವಕ್ಕೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ. ಧೋನಿ ಅವರ ನಾಯಕತ್ವದಲ್ಲಿ ಸಿಎಸ್ ಕೆ ತಂಡ ಇದುವರೆಗೆ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದೆ.



Join Whatsapp