Home ಟಾಪ್ ಸುದ್ದಿಗಳು 12 ರಾಜ್ಯಸಭಾ ಸದಸ್ಯರ ಅಮಾನತು ಹಿಂಪಡೆಯದ ವೆಂಕಯ್ಯ ನಾಯ್ಡು: ಪ್ರತಿಪಕ್ಷಗಳ ಸಭಾತ್ಯಾಗ

12 ರಾಜ್ಯಸಭಾ ಸದಸ್ಯರ ಅಮಾನತು ಹಿಂಪಡೆಯದ ವೆಂಕಯ್ಯ ನಾಯ್ಡು: ಪ್ರತಿಪಕ್ಷಗಳ ಸಭಾತ್ಯಾಗ

ನವದೆಹಲಿ:  ‘ದುರ್ವರ್ತನೆ, ಉದ್ಧಟತನ, ಅಶಿಸ್ತು ಮತ್ತು ಹಿಂಸಾತ್ಮಕ ವರ್ತನೆ’ ತೋರಿದ ಆರೋಪದಲ್ಲಿ ರಾಜ್ಯಸಭೆಯ 12 ಸದಸ್ಯರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತು ಮಾಡಲಾಗಿರುವ ಕ್ರಮವನ್ನು ಹಿಂತೆಗೆದುಕೊಳ್ಳುವುದಿಲ್ಲ ಎಂದು ರಾಜ್ಯಸಭಾ ಅಧ್ಯಕ್ಷ ಎಂ. ವೆಂಕಯ್ಯ ನಾಯ್ಡು ತಿಳಿಸಿದರು. ಈ ಹಿನ್ನೆಲೆ ಪ್ರತಿಪಕ್ಷಗಳು ಸಭಾತ್ಯಾಗ ನಡೆಸಿವೆ.

ಅಮಾನತುಗೊಂಡಿರುವ ಸದಸ್ಯರು ತಮ್ಮ ವರ್ತನೆ ಬಗ್ಗೆ ಪಶ್ಚಾತ್ತಾಪ ವ್ಯಕ್ತಪಡಿಸಲಿಲ್ಲ. ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡರು. ಆ ದಿನ ನಡೆದ ಘಟನೆಯಲ್ಲಿ ಸಭಾಧ್ಯಕ್ಷರು ತೆಗೆದುಕೊಂಡ ಕ್ರಮವಲ್ಲ. ಅದು ಮೇಲ್ಮನೆ ತೆಗೆದುಕೊಂಡ ಕ್ರಮ. ಆಗಸ್ಟ್‌ 10ರ ದಾಖಲೆಗಳನ್ನು ಗಮನಿಸಿ. ನಾವು ಸದಸ್ಯರ ಹೆಸರುಗಳನ್ನು ಹೇಳಿದ್ದೇವೆ ಮತ್ತು ತಮ್ಮ ಸ್ಥಾನಗಳಲ್ಲಿ ಕುಳಿತುಕೊಳ್ಳುವಂತೆ ವಿನಂತಿಸಿದ್ದೇವೆ ಎಂದು ವೆಂಕಯ್ಯ ನಾಯ್ಡು ತಿಳಿಸಿದರು.

ಅಮಾನತುಗೊಳಿಸುವ ಮೊದಲು ಸದಸ್ಯರ ಹೆಸರನ್ನು ಹೇಳಬೇಕು. ಅದಾದ ನಂತರವೇ ಅಮಾನತು ಸೂಚನೆ ಹೊರಡಿಸಬೇಕು ಎಂಬ ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾದಕ್ಕೆ ವೆಂಕಯ್ಯನಾಯ್ಡುಈ ರೀತಿಯಾಗಿ ಪ್ರತಿಕ್ರಿಯಿಸಿದರು.

Join Whatsapp
Exit mobile version