ಹೊಸದಿಲ್ಲಿ: ತನ್ನ ಅನುಯಾಯಿಯ ಹತ್ಯೆಗೆ ಸಂಬಂಧಿಸಿದಂತೆ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಇಂದು (ಮಂಗಳವಾರ) ಪಂಚಕುಲಾ ಸಿಬಿಐ ನ್ಯಾಯಾಲಯವು ಶಿಕ್ಷೆ ಪ್ರಕಟಿಸಲಿದೆ.
ಗುರ್ಮೀತ್ ಸಿಂಗ್ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿತ್ತು. ತೀರ್ಪಿನ ಹಿನ್ನೆಲೆಯಲ್ಲಿ ಹರಿಯಾಣದ ಪಂಚಕುಲಾ ಜಿಲ್ಲೆಯಲ್ಲಿ ನಿಷೇಧ ಹೇರಲಾಗಿದೆ. ಗುರ್ಮೀತ್ ರಾಮ್ ರಹೀಮ್ ಸೇರಿದಂತೆ ಐವರು ಅಪರಾಧಿಗಳಿಗೆ ಇಂದು ಶಿಕ್ಷೆ ಪ್ರಕಟವಾಗಲಿದೆ ಎಂದು ವರದಿಯಾಗಿದೆ.
ಇಂದು ಶಿಕ್ಷೆ ಪ್ರಕಟವಾಗುವ ಹಿನ್ನೆಲೆಯಲ್ಲಿ ಶಾಂತಿ ಕದಡುವ, ಗಲಭೆ ಸೃಷ್ಟಿಸುವ, ಜೀವ ಮತ್ತು ಆಸ್ತಿಗೆ ಅಪಾಯವನ್ನುಂಟುಮಾಡುವ ಯಾವುದೇ ಘರ್ಷಣೆಯ ಸಾಧ್ಯತೆಯಿರುವುದರಿಂದ ಸೆಕ್ಷನ್ 144 ಅನ್ನು ಘೋಷಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ”ಎಂದು ಡಿಸಿಪಿ ಮೋಹಿತ್ ಹಂಡ ತಿಳಿಸಿದ್ದಾರೆ.