ಹಿರಿಯ ನಟ ದ್ವಾರಕೀಶ್ ನಿಧನ

Prasthutha|

ಬೆಂಗಳೂರು: ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (81) ನಿಧನರಾಗಿದ್ದಾರೆ.ಹೃದಯಾಘಾತದಿಂದ ದ್ವಾರಕೀಶ್ ಅವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.

ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ದ್ವಾರಕೀಶ್ ಅವರು ಹುಣಸೂರು ನಲ್ಲಿ ಶಮಾರಾವ್ ಮತ್ತು ಜಯಮ್ಮರವರಿಗೆ ಜನಿಸಿದರು, ಶಾರದಾ ವಿಲಾಸ್ ಮತ್ತು ಬನುಮಯ್ಯ ಶಾಲೆಯಲ್ಲಿ ತನ್ನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ ನಂತರ CPC ಪಾಲಿಟೆಕ್ನಿಕ್ನಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಮುಗಿಸಿದರು ನಂತರ ಅವರ ಸೋದರನ ಜೊತೆ ಸೇರಿ ಭಾರತ್ ಆಟೋ ಸ್ಪೇರ್ ಸ್ಟೋರ್ ಶುರುಮಾಡಿದರು. ೧೯೬೩ರಲ್ಲಿ, ಅವರು ವ್ಯಾಪಾರ ಬಿಟ್ಟು ಸಿನೆಮಾ ನಟನೆಯನ್ನು ಆಯ್ದುಕೊಂಡರು.ಕನ್ನಡದ ಪ್ರಮುಖ ನಟರಾದ ವಿಷ್ಣುವರ್ಧನ್ ಮತ್ತು ದ್ವಾರಕೀಶ್ ಜೋಡಿ ಕಳ್ಳ-ಕುಳ್ಳ ಜೋಡಿ ಎಂದು ಪ್ರಸಿದ್ಧವಾಗಿತ್ತು.



Join Whatsapp