ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ.