ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ ಇನ್ನಿಲ್ಲ

Prasthutha|

ಮಂಡ್ಯ:  ಹಿರಿಯ ಹೋರಾಟಗಾರ, ಮಾಜಿ ಸಂಸದ ಜಿ.ಮಾದೇಗೌಡ (94) ಅವರು ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು.

- Advertisement -

ಮಂಡ್ಯದ ಅಂದಿನ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಮಾದೇಗೌಡರು 1980ರ ದಶಕದಲ್ಲಿ ಆರ್​ ಗುಂಡೂರಾವ್​ ಅವರ ಮಂತ್ರಿ ಮಂಡಲದಲ್ಲಿ ಅರಣ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ನಂತರ ಮಂಡ್ಯ ಲೋಕಸಭಾ ಕ್ಷೇತ್ರದಿಂದ 1989 ಮತ್ತು 1991ರಲ್ಲಿ ಎರಡು ಬಾರಿ ಆಯ್ಕೆಯಾಗಿದ್ದರು.

ಕಾವೇರಿ ಹೋರಾಟ ಸೇರಿದಂತೆ ಹಲವಾರು ರೈತ ಪರ ಹೋರಾಟಗಳಲ್ಲಿ ಮಾದೇಗೌಡರು ಸಕ್ರಿಯರಾಗಿದ್ದರು.

Join Whatsapp