ಹಿರಿಯ ಚಿತ್ರ ಕಲಾವಿದ ಬಿ.ಕೆ.ಎಸ್ ವರ್ಮಾ ನಿಧನ

Prasthutha|

ಬೆಂಗಳೂರು: ಕರ್ನಾಟಕದ ಪ್ರಸಿದ್ಧ ಹಿರಿಯ ಚಿತ್ರಕಲಾವಿದ ಬಿ.ಕೆ.ಎಸ್ ವರ್ಮಾ (74) ನಿಧನರಾಗಿದ್ದಾರೆ.

- Advertisement -


ಆರೋಗ್ಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ತಿಂಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 8.20ಕ್ಕೆ ಹೆಬ್ಬಾಳ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಅತ್ತಿಬೆಲೆ ಬಳಿಯ ಕರ್ನೂರಿನಲ್ಲಿ 1949ರಲ್ಲಿ ವರ್ಮ ಅವರು ಜನಿಸಿದ್ದರು. ತಂದೆ ಕೃಷ್ಣಮಾಚಾರ್ಯರು, ಸಂಗೀತಗಾರರಾಗಿದ್ದರು. ತಾಯಿ ಜಯಲಕ್ಷ್ಮಿ, ಚಿತ್ರ ಕಲಾವಿದರಾಗಿದ್ದರು.
ವರ್ಮ ಸಾಧನೆಗೆ ರಾಜ್ಯ ಲಲಿತಕಲಾ ಅಕಾಡೆಮಿ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ, ರಾಜೀವ್ ಗಾಂಧಿ ಪ್ರಶಸ್ತಿ ಲಭಿಸಿದ್ದವು.