ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಜಿಎನ್ ರಂಗನಾಥ್ ರಾವ್ (83) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಂಗನಾಥ್ ರಾವ್ ತಮ್ಮ ಪುತ್ರ ಮತ್ತು ಮಗಳನ್ನು ಅಗಲಿದ್ದಾರೆ.
ಬಹುಮುಖ ವ್ಯಕ್ತಿತ್ವ ಹೊಂದಿದ್ದ ಅವರು ‘ನವರಂಗ’ ಎಂಬ ಕಾವ್ಯನಾಮದಲ್ಲಿ ಕಾದಂಬರಿಗಳು, ಸಣ್ಣ ಕಥೆಗಳು, ನಾಟಕಗಳು, ವಿಮರ್ಶಾತ್ಮಕ ಪ್ರಬಂಧಗಳನ್ನು ಬರೆದಿದ್ದಾರೆ. ಕವಿಯಾಗಿ ಅವರು ಉದಯೋನ್ಮುಖ ಕವಿಗಳಿಗೆ ಪ್ರೋತ್ಸಾಹ ನೀಡಿದ್ದಾರೆ. ಅವರು ಮಾಧ್ಯಮಕ್ಕೆ ನೀಡಿದ ಕೊಡುಗೆಗಳನ್ನು ಪರಿಗಣಿಸಿ 2018ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ.