ಹಿರಿಯ ಪತ್ರಕರ್ತ ಸಚ್ಚಿದಾನಂದಮೂರ್ತಿ ನಿಧನ

Prasthutha|

ಬೆಂಗಳೂರು: ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್. ಸಚ್ಚಿದಾನಂದಮೂರ್ತಿ (66) ಶುಕ್ರವಾರ ನಿಧನರಾದರು.

- Advertisement -


ಸಚ್ಚಿದಾನಂದಮೂರ್ತಿ ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ಅವರು ಇತ್ತೀಚೆಗೆ ಶ್ವಾಸಕೋಶದ ಕಸಿಗೆ ಒಳಗಾಗಿದ್ದರು. ಆ ನಂತರ ಅವರ ಆರೋಗ್ಯ ಹದಗೆಟ್ಟಿತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.


ಈ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಹಿರಿಯ ಪತ್ರಕರ್ತ, ‘ಮಲಯಾಳ ಮನೋರಮಾ’ ಮತ್ತು ‘ದಿ ವೀಕ್’ ಪತ್ರಿಕೆಗಳ ಮಾಜಿ ಸ್ಥಾನೀಯ ಸಂಪಾದಕರಾಗಿದ್ದ ಕೆ.ಎಸ್.ಸಚ್ಚಿದಾನಂದಮೂರ್ತಿ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನಗೆ ಆತ್ಮೀಯರು ಮತ್ತು ಹಿತೈಷಿಗಳಾಗಿದ್ದ ಸಚ್ಚಿದಾನಂದಮೂರ್ತಿಯವರು ದೆಹಲಿಯ ಮಾಧ್ಯಮರಂಗದಲ್ಲಿ ಸಕ್ರಿಯರಾಗಿದ್ದ ಕೆಲವೇ ಕೆಲವು ಹಿರಿಯ ಕನ್ನಡಿಗ ಪತ್ರಕರ್ತರಲ್ಲಿ ಒಬ್ಬರಾಗಿದ್ದರು. ರಾಜ್ಯ-ರಾಷ್ಟ್ರಗಳ ವಿದ್ಯಮಾನಗಳ ಜ್ಞಾನಕೋಶದಂತಿದ್ದ ಸಚ್ಚಿದಾನಂದ ಮೂರ್ತಿಯವರ ಸಾವು ಮಾಧ್ಯಮರಂಗಕ್ಕೆ ತುಂಬಲಾರದ ನಷ್ಟ. ಅವರ ಕುಟುಂಬ ಮತ್ತು ಸ್ನೇಹಿತರ ದು:ಖದಲ್ಲಿ ನಾನು ಭಾಗಿಯಾಗಿದ್ದೇನೆ ಎಂದು ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.