Home ಟಾಪ್ ಸುದ್ದಿಗಳು ಕನ್ನಡದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಕನ್ನಡದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

ಬೆಂಗಳೂರು: ನೂರಾರು ಸಿನಿಮಾಗಳಲ್ಲಿ ನಟಿಸಿ ಪ್ರೇಕ್ಷಕರ ಮೆಚ್ಚುಗೆ ಗಳಿಸಿದ್ದ ಕನ್ನಡದ ಹಿರಿಯ ನಟ ಅಶೋಕ್​ ರಾವ್ ನಿಧನರಾಗಿದ್ದಾರೆ.

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ.

ಡಾ. ರಾಜ್​ಕುಮಾರ್ ಸೇರಿದಂತೆ ಅನೇಕ ಸ್ಟಾರ್​ ಕಲಾವಿದರ ಜೊತೆ ಅಶೋಕ್​ ರಾವ್​ ತೆರೆಹಂಚಿಕೊಂಡಿದ್ದರು. ಹಲವಾರು ಸಿನಿಮಾಗಳಲ್ಲಿ ನಟಿಸಿದ್ದ ಅವರ ಅನುಭವ ಅಪಾರ. ರಾತ್ರಿ 12.30ಕ್ಕೆ ಅವರು ನಿಧನರಾದರು ಎಂದು ಕುಟುಂಬದವರು ತಿಳಿಸಿದ್ದಾರೆ. ಇವರು ಪತ್ನಿ, ಮಗ ಹಾಗೂ ಸೊಸೆಯನ್ನು ಅಶೋಕ್​ ರಾವ್​ ಅಗಲಿದ್ದಾರೆ.

ಅಶೋಕ್ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸ್ಯಾಂಡಲ್​ವುಡ್​​ ಸಿನಿಮಾ ಪ್ರೇಕ್ಷಕರು, ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಅಶೋಕ್ ರಾವ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. 

Join Whatsapp
Exit mobile version