ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್ ಸ್ಥಿತಿ ಗಂಭೀರ

Prasthutha|

ಬೆಂಗಳೂರು: ಕನ್ನಡ ಚಿತ್ರ ರಂಗದ ಹಿರಿಯ ನಟ ಶಿವರಾಮ್ ಮೂರು ದಿನಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ, ನಂತರ ಬಿಡುಗಡೆಗೊಂಡಿದ್ದರು. ಆದರೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಬಿದ್ದ ಕಾರಣ ತಲೆಗೆ ಏಟಾಗಿದ್ದು ಸದ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಹೊಸಕೆರೆ ಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

3 ದಿನಗಳ ಹಿಂದೆ ಕಾರಿನಲ್ಲಿ ತೆರಳುವಾಗ ಅಪಘಾತವಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ಶಿವರಾಮ್ ಆರೋಗ್ಯದ ಬಗ್ಗೆ ಹಿರಿಯ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು ‘‘ಮೂರು ದಿನಗಳ ಹಿಂದೆ ಕಾರಿನಲ್ಲಿ ಹೊರಗೆ ಹೋಗಿದ್ದ ವೇಳೆ ಕಾರು ಅಪಘಾತವಾಗಿತ್ತು. ಆ ನಂತರ ಮೂರು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಿ ಮನೆಗೆ ಹಿಂತಿರುಗಿದ್ದರು.

ಮೊನ್ನೆ ರಾತ್ರಿ ಮನೆಯಲ್ಲಿ ಅಯ್ಯಪ್ಪನ ಪೂಜೆ ಮಾಡಲು ರೂಂಗೆ ತೆರಳಿದ್ದ ವೇಳೆ ರೂಂನಲ್ಲಿ ಬಿದ್ದ ಹಿನ್ನೆಲೆ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಮೊನ್ನೆ ರಾತ್ರಿಯೇ ಅಸ್ಪತ್ರೆಗೆ ಕರೆದುಕೊಂಡು ಬಂದು ಸ್ಕ್ಯಾನಿಂಗ್ ಮಾಡಿಸಿದ್ದೆವು. ಸ್ಕ್ಯಾನಿಂಗ್ ರಿಪೋರ್ಟ್ ನಲ್ಲಿ ಮೆದುಳಿನಲ್ಲಿ ರಕ್ತಸ್ರಾವ ಆಗಿರೋದು ಗೊತ್ತಾಯಿತು. ವೈದ್ಯರು ಸರ್ಜರಿ ಮಾಡಬೇಕು ಎಂದು ಹೇಳಿದರು. ಅದ್ರೆ ನಮ್ಮ ತಂದೆಗೆ ವಯಸ್ಸಾಗಿದ್ದರಿಂದ ಸರ್ಜರಿ ಮಾಡಲು ಸಾಧ್ಯವಾಗುತ್ತಿಲ್ಲ , ಸದ್ಯ ಐಸಿಯುನಲ್ಲೇ ಅವರಿಗೆ ಚಿಕಿತ್ಸೆ ಮುಂದು ವರೆದಿದೆ’’ ಎಂದು ರವಿಶಂಕರ್ ತಿಳಿಸಿದ್ದಾರೆ.

Join Whatsapp