ಮಂಗಳೂರು: ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕರ್ (87) ನಿಧನರಾಗಿದ್ದಾರೆ. ಕೆಲವು ಸಮಯಗಳಿಂದ ವಯೋಸಜಹ ಖಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳೂರಿನ ಲೇಡಿ ಹಿಲ್ ಬಳಿಯಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾರಾ ಅಬೂಬಕರ್ ಕನ್ನಡದ ಪ್ರಮುಖ ಕಥೆ, ಕಾದಂಬರಿಗಾರ್ತಿಯಾಗಿ ಪ್ರಸಿದ್ಧರಾಗಿದ್ದರು.
ಸಾರಾ ಅಬೂಬಕ್ಕರ್ ಅವರು ಜೂನ್ 30, 1936ರಂದು ಕಾಸರಗೋಡಿನ ಚಂದ್ರಗಿರಿ ತೀರದ ಕುಗ್ರಾಮವೊಂದರಲ್ಲಿ ಜನಿಸಿದರು. ಅವರು ಹುಟ್ಟೂರಿನಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದು, ಕಾಸರಗೋಡಿನಲ್ಲಿ ಪ್ರೌಢಶಿಕ್ಷಣ ಮುಗಿಸಿದ್ದರು. ಹಲವಾರು ವರ್ಷ ಸಾಮಾಜಿಕ ಸಮಸ್ಯೆಗಳ ಮಥನದಿಂದಾಗಿ 40 ವರ್ಷ ದಾಟಿದ ನಂತರ ಸಾರಾ ಅಬೂಬಕ್ಕರ್ ಬರೆಯಲು ಪ್ರಾರಂಭಿಸಿದರು.ಅವರು ಬರೆದ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ದ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯು ಮೆಚ್ಚುಗೆ ಪಡೆಯಿತು.
ಸಾ.ರಾ.ಅಬೂಬಕ್ಕರ್ ಬರೆದ ಕಾದಂಬರಿಗಳು
ಚಂದ್ರಗಿರಿಯ ತೀರದಲ್ಲಿ
ಸಹನಾ
ವಜ್ರಗಳು
ಕದನವಿರಾಮ
ಸುಳಿಯಲ್ಲಿ ಸಿಕ್ಕವರು
ಪ್ರವಾಹ-ಸುಳಿ
ತಳ ಒಡೆದ ದೋಣಿ
ಪಂಜರ
ಇಳಿಜಾರು
ಕಾಣಿಕೆ
ಕಥಾ ಸಂಕಲನಗಳು
ಚಪ್ಪಲಿಗಳು
ಪಯಣ ಮತ್ತು ಇತರ ಕಥೆಗಳು
ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು
ಖೆಡ್ಡ
ಸುಮಯ್ಯಾ (ಜನಪದ ಆಧರಿಸಿದ ಕಥೆಗಳು)
ಗಗನ ಸಖಿ
ಪಡೆದ ಪ್ರಶಸ್ತಿ ಗೌರವಗಳು
ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ
ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ
ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ
‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ
‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ ಮತ್ತು
ಸಂದೇಶ ಪ್ರಶಸ್ತಿ
ಅನುಪಮ ಪ್ರಶಸ್ತಿ
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ
ಮಾಸ್ತಿ ಪ್ರಶಸ್ತಿ
ನೃಪತುಂಗ ಪ್ರಶಸ್ತಿ
ಮುಂತಾದ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ