‘ನಾವು ಕತ್ತಿ ಹಿಡಿದರೆ ಮುಸ್ಲಿಮರಿಗೆ ಶವ ಹೂಳಲು ಜಾಗವಿರದು’: ಪ್ರಚೋದನಾಕಾರಿ ಹೇಳಿಕೆ ನೀಡಿದ VHP ನಾಯಕ

Prasthutha|

ತುಮಕೂರು: ನಾವು ಕತ್ತಿ ಹಿಡಿದರೆ ಮುಸ್ಲಿಮರಿಗೆ ಶವ ಹೂಳಲು ಜಾಗವಿರದು ಎಂದು ವಿಶ್ವ ಹಿಂದೂ ಪರಿಷತ್ (VHP) ನಾಯಕ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.

- Advertisement -

ಬಜರಂಗದಳ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಕರೆ ನೀಡಿದ್ದ ತುಮಕೂರು ನಗರ ಬಂದ್ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ (VHP) ರಾಜ್ಯ ಸಂಚಾಲಕ ಬಸವರಾಜ್, ‘ಹಿಂದೂಗಳ ಮೇಲೆ ನಡೆಯುವ ಹಲ್ಲೆಗೆ ನಾವು ಪ್ರತಿಕ್ರಿಯೆ ಕೊಡಲು ಕತ್ತಿ ಹಿಡಿದರೆ ಮುಸ್ಲಿಮರಿಗೆ ಶವ ಹೂಳಲು ಜಾಗ ಇರುವುದಿಲ್ಲ’ ಎಂದು ಹೇಳಿಕೆ ನೀಡಿದ್ದಾರೆ.

‘ಹಿಂದೂಗಳ ಮೇಲೆ ಹಲ್ಲೆ, ಗೂಂಡಾಗಿರಿ, ಗೋ ಹತ್ಯೆ, ಲವ್ ಜಿಹಾದ್ ನಡೆಸಿದರೆ ಸುಮ್ಮನೆ ಬಿಡುವುದಿಲ್ಲ. ನಾವು ಬಹುಸಂಖ್ಯಾತರು, ನಮ್ಮೊಂದಿಗೆ ಬದುಕಬೇಕಾದರೆ ಸರಿಯಾಗಿ ಇರಬೇಕು. ನಾವು ಹೇಳಿದಂತೆ ಕೇಳಬೇಕು. ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ನೀಡುತ್ತೇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

‘ಹಿಂದೂ ಹೆಣ್ಣು ಮಕ್ಕಳ ಮೇಲೆ ಕಣ್ಣು ಹಾಕಿದರೆ ನಿಮಗೆ ಉಳಿಗಾಲವಿಲ್ಲ. ಕಣ್ಣೆತ್ತಿ ನೋಡಿದರೆ ಸುಮ್ಮನೆ ಬಿಡುವುದಿಲ್ಲ. ನಿಮ್ಮ ಹೆಣ್ಣು ಮಕ್ಕಳು ಉಳಿಯುವುದಿಲ್ಲ. ಈ ವೇದಿಕೆಯಿಂದಲೇ ಎಚ್ಚರಿಕೆ ನೀಡುತ್ತಿದ್ದೇವೆ’ ಎಂದು ಹೇಳಿದರು.

Join Whatsapp