Home ಟಾಪ್ ಸುದ್ದಿಗಳು ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಮಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಮಂಗಳೂರು: ಉಪರಾಷ್ಟ್ರಪತಿ ಜಗದೀಶ್ ಧನಕರ್ ಅವರು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸಿದರು.

ರಾಜ್ಯ ಸರಕಾರದ ಪರವಾಗಿ ಉನ್ನತ ಶಿಕ್ಷಣ ಸಚಿವ ಎಂ. ಸಿ. ಸುಧಾಕರ್ ಅವರು ಉಪರಾಷ್ಟ್ರಪತಿಗಳನ್ನು ಸ್ವಾಗತಿಸಿದರು. ಸಂಸದ ಕ್ಯಾ. ಬ್ರಿಜೇಶ್ ಚೌಟ, ಡಿಸಿ ಮುಲ್ಲೈ. ಮುಹಿಲನ್, ಕಮೀಷನರ್ ಅನುಪಮ್ ಅಗ್ರವಾಲ್ ಈ ಸಂದರ್ಭದಲ್ಲಿ ಇದ್ದರು. ಬಳಿಕ ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ತೆರಳಿದರು.

ಮಂಗಳವಾರ ಬೆಳಗ್ಗೆ ದಿಲ್ಲಿಯಿಂದ ಹೊರಟು ಮಧ್ಯಾಹ್ನ 1:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದ್ದಾರೆ. ಬಳಿಕ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿದ್ದಾರೆ.

ಧರ್ಮಸ್ಥಳದಲ್ಲಿ ಮೆಗಾ ಕ್ಯೂ ಕಾಂಪ್ಲೆಕ್ಸ್ ಉದ್ಘಾಟನೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

Join Whatsapp
Exit mobile version