ಗ್ರಾ. ಪಂ.ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ಹೆಚ್ಚಳ, ಉಚಿತ ಬಸ್ ಪಾಸ್ ಗೂ ಚಿಂತನೆ: ಶ್ರೀನಿವಾಸ ಪೂಜಾರಿ

Prasthutha|

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಶೀಘ್ರ ಅಂತಿಮ ತೀರ್ಮಾನಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ.

- Advertisement -


ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಸುನಿಲ್ ಗೌಡ ಪಾಟೀಲ್ ಅವರು ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪರವಾಗಿ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಈ ಭರವಸೆ ನೀಡಿದ್ದು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಶೀಘ್ರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಗೌರವಧನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ಕನಿಷ್ಠ ಕೂಲಿಗಿಂತಲೂ ಕಡಿಮೆ ಗೌರವಧನವನ್ನು ಗ್ರಾಪಂ ಸದಸ್ಯರಿಗೆ ನೀಡಲಾಗುತ್ತಿದೆ. ಗ್ರಾಪಂ ಅಧ್ಯಕ್ಷರಿಗೆ 5000 ರೂ., ಉಪಾಧ್ಯಕ್ಷರಿಗೆ 4000 ರೂ. ಹಾಗೂ ಸದಸ್ಯರಿಗೆ 3000 ರೂ. ವರೆಗೆ ಗೌರವಧನ ಹೆಚ್ಚಳ ಮಾಡಬೇಕು. ಉಚಿತ ಬಸ್ ಪಾಸ್ ಕೊಡಬೇಕು ಎಂದು ಸುನಿಲ್ ಗೌಡ ಪಾಟೀಲ್ ಒತ್ತಾಯಿಸಿದ್ದು, ಇದಕ್ಕೆ ಅನೇಕ ಸದಸ್ಯರು ಬೆಂಬಲ ವ್ಯಕ್ತಪಡಿಸಿದ್ದಾರೆ.

Join Whatsapp