ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಇತರ ಸಂಸದರೊಂದಿಗೆ ಮತ ಚಲಾಯಿಸಿದರು.
ದೇಶದ ಮುಂದಿನ ಉಪರಾಷ್ಟ್ರಪತಿಯನ್ನು ಆಯ್ಕೆ ಮಾಡುವ ಮತದಾನ ಶನಿವಾರ ಆರಂಭವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಸಂಸತ್ತಿನಲ್ಲಿ ಮತ ಚಲಾಯಿಸಿದರು.
ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೆಟ್ ಆಳ್ವ ವಿರುದ್ಧ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್ ಡಿಎ) ಅಭ್ಯರ್ಥಿ ಸ್ಪರ್ಧಿಸಿರುವ ಉಪರಾಷ್ಟ್ರಪತಿ ಚುನಾವಣೆಯ ಮತದಾನ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮುಂದುವರಿಯಲಿದೆ.
ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.