ನವದೆಹಲಿ: 16ನೇ ಉಪ ರಾಷ್ಟ್ರಪತಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಆಗಸ್ಟ್ 6ರಂದು ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಜುಲೈ 5ರಂದು ಮತದಾನಕ್ಕೆ ಅಧಿಸೂಚನೆ ಹೊರಬೀಳಲಿದೆ. ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ನಾಮಪತ್ರದ ಪರಿಶೀಲನೆ ಜುಲೈ 20ರಂದು ನಡೆಯಲಿದೆ. ಜು 22 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಮತದಾನ ಅಗತ್ಯವಿದ್ದರೆ ಆಗಸ್ಟ್ 6ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಗಳ ವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.