ಇಂದು ಉಪರಾಷ್ಟ್ರಪತಿ ಚುನಾವಣೆ: 10 ಗಂಟೆಗೆ ಮತದಾನ ಆರಂಭ

Prasthutha|

ನವದೆಹಲಿ: ಇಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ದೇಶದ 16 ನೇ ಉಪರಾಷ್ಟ್ರಪತಿ ಆಯ್ಕೆಗಾಗಿ 10 ಗಂಟೆಯಿಂದ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮತ ಚಲಾಯಿಸಲಿದ್ದಾರೆ.

- Advertisement -

ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್ 10 ಕ್ಕೆ ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಜುಲೈ 5 ರಂದು ಉಪರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ 19 ಕ್ಕೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ಈ ಬಾರಿ ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಜಗದೀಪ್ ಧನ್ಕರ್ ಮತ್ತು ವಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲಕ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಹಾಗೂ ನಾಮನಿರ್ದೇಶಿತ ಸದಸ್ಯರು ಸೇರಿ ಒಟ್ಟು 788 ಸದಸ್ಯರು ಮತ ಚಲಾಯಿಸಲಿದ್ದಾರೆ. ಸೀಕ್ರೆಟ್ ಬ್ಯಾಲೆಟ್ ಓಟಿಂಗ್ ಪದ್ಧತಿಯಲ್ಲಿ ಮತದಾನ ನಡೆಯಲಿದ್ದು, ಪ್ರತಿಯೊಬ್ಬ ಸದಸ್ಯರೂ ಅಭ್ಯರ್ಥಿಗಳ ಹೆಸರಿನ ಮುಂದೆ ತಮ್ಮ ಆದ್ಯತೆಯ ಮತವನ್ನು ನೀಡಬೇಕಾಗಿದೆ,

- Advertisement -

ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಸಂಸತ್ ಭವನದಲ್ಲಿ ಮತದಾನ ನಡೆಯಲಿದ್ದು, 5 ಗಂಟೆಯ ಬಳಿಕ ಮತ ಎಣಿಕೆ ನಡೆಯಲಿದೆ. ಬಳಿಕ ನೂತನ ಉಪ ರಾಷ್ಟ್ರಪತಿಯನ್ನು ಘೋಷಿಸಲಾಗುವುದು.

ಎನ್ ಡಿ ಎ ಪರ ಹೆಚ್ಚು ಸದಸ್ಯರ ಬಲ ಇರುವುದರಿಂದ ಜಗದೀಪ್ ಧನ್ ಕರ್ ಸುಲಭವಾಗಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.

Join Whatsapp