Home ಟಾಪ್ ಸುದ್ದಿಗಳು ನಾಳೆಯಿಂದ ಉಪ ರಾಷ್ಟ್ರಪತಿ ರಾಜ್ಯ ಪ್ರವಾಸ

ನಾಳೆಯಿಂದ ಉಪ ರಾಷ್ಟ್ರಪತಿ ರಾಜ್ಯ ಪ್ರವಾಸ

ಬೆಂಗಳೂರು ; ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಭಾನುವಾರದಿಂದ ಇದೇ 17ರವರೆಗೆ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಅವರು, ಸೋಮವಾರ ಬೆಂಗಳೂರಿನ ಪಿ.ಇ.ಎಸ್ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.


16ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು, 17ರಂದು ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಬಾಹ್ಯಾಕಾಶ ವಿಜ್ಞಾನಿ ಯು.ಆರ್.ರಾವ್ ಉಪಗ್ರಹ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ಅಂದೇ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

Join Whatsapp
Exit mobile version