ಮೂಲ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಗೆಲುವು ಕಷ್ಟ : ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ ಮುನಿಯಪ್ಪ

Prasthutha|

ಬೆಂಗಳೂರು: ಕಾಂಗ್ರೆಸ್ ನಿಷ್ಠರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಗೆಲುವು ಕಷ್ಟ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೋಲಾರ ಕ್ಷೇತ್ರದಲ್ಲಿ ಸಮಸ್ಯೆ ಇದೆ. ಅದನ್ನು ಸರಿಪಡಿಸಿಕೊಂಡು ಕೋಲಾರಕ್ಕೆ ಬಂದರೆ ಅನುಕೂಲ. ಸಿದ್ದರಾಮಯ್ಯ ಅವರನ್ನು ಸೋಲಿ ಸಲು ಕಾಂಗ್ರೆಸ್ ನಲ್ಲಿ ಯಾರೂ ಸಂಚು ಮಾಡುತ್ತಿಲ್ಲ. ಆದರೆ, ಅವರು ಮೂಲ ಕಾಂಗ್ರೆಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಳೆದ ಬಾರಿ ಬಿಜೆಪಿಗೆ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ಎದುರಿಸಿದರೆ ಗೆಲುವು ಕಷ್ಟ ಎಂದರು.

ಕಳೆದ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿದವರನ್ನು ನಂಬಿಕೊಂಡು ಬಂದರೆ ಗೆಲುವು ಕಷ್ಟವಾಗಬಹುದು ಎಂದು ಸಿದ್ದರಾಮಯ್ಯ ಅವರಿಗೂ ಹೇಳಿದ್ದೇನೆ ಎಂದರು.

- Advertisement -

ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಹೇಳಿದರೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ.



Join Whatsapp