Home ಟಾಪ್ ಸುದ್ದಿಗಳು ತಲೆಗೆ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ: ವೀಡಿಯೋ ವೈರಲ್

ತಲೆಗೆ ಇಟ್ಟಿಗೆಯಿಂದ ಹೊಡೆದು ವ್ಯಕ್ತಿಯ ಕೊಲೆ: ವೀಡಿಯೋ ವೈರಲ್

ಗಾಝಿಯಾಬಾದ್: ಉತ್ತರ ಪ್ರದೇಶದ ಗಾಝಿಯಾಬಾದ್’ನ ರಸ್ತೆ ಬದಿಯ ರೆಸ್ಟೋರೆಂಟ್ ಎದುರು ವಾಹನ ಪಾರ್ಕಿಂಗ್ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಬಳಿಕ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಲೆ ನಡೆಸಿರುವ ಘಟನೆ ವರದಿಯಾಗಿದೆ. ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪ್ರತ್ಯಕ್ಷದರ್ಶಿಗಳು ನೋಡುತ್ತಿದ್ದಂತೆ ಒಬ್ಬ ಮತ್ತೊಬ್ಬನ ತಲೆಗೆ ಇಟ್ಟಿಗೆಯಿಂದ ಹೊಡೆಯುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿಮಧ್ಯೆ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳಿಂದ ತಿಳಿದು ಬಂದಿವೆ. ಮೃತನ ಹೆಸರು ವರುಣ್ ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ವರುಣ್ ಎಂಬಾತ ತನ್ನ ಕಾರನ್ನು ಪಕ್ಕದ ವಾಹನದ ಬಾಗಿಲು ತೆರೆಯಲು ಸಾಧ್ಯವಾಗದ ರೀತಿಯಲ್ಲಿ ಪಾರ್ಕ್ ಮಾಡಿದ್ದ. ಇದಾದ ಬಳಿಕ ವರುಣ್ ಮತ್ತು ಇನ್ನೊಂದು ಕಾರಿನಲ್ಲಿದ್ದವರ ಮಧ್ಯೆ ಗಲಾಟೆ ನಡೆದಿದ್ದು, ಇದು ತಾರಕಕ್ಕೇರಿ ಇಟ್ಟಿಗೆಯಿಂದ ಹಲ್ಲೆ ನಡೆಸಲಾಗಿದ್ದು, ಅದು ಪ್ರಾಣಹರಣ ಮಾಡಿದೆ ಎಂದು ತಿಳಿಸಿದ್ದಾರೆ.

https://twitter.com/AhmedKhabeer_/status/1585211056473141249
Join Whatsapp
Exit mobile version