ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ವ್ಯಕ್ತಿಗಳನ್ನು ವಿವಸ್ತ್ರಗೊಳಿಸಿ, ಥಳಿಸಿದ ವೀಡಿಯೋ ವೈರಲ್

Prasthutha|

ಭೋಪಾಲ್: ದನದ ಮಾಂಸ ಮಾರಾಟದ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿ ಬೆಲ್ಟ್ ನಿಂದ ಥಳಿಸಿದ ಆಘಾತಕಾರಿ ಘಟನೆ ಛತ್ತಿಸ್ಗಢದ ಬಿಸ್ಲಾಪುರದಲ್ಲಿ ನಡೆದಿದೆ.

- Advertisement -

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಬ್ಬರನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿ ಹಿಂಬದಿಯಿಂದ ಥಳಿಸುತ್ತಿರುವುದು ವೀಡಿಯೋದಲ್ಲಿ ಕಾಣಬಹುದು.

ಘಟನೆಗೆ ಸಂಬಂಧಿಸಿದಂತೆ ನರಸಿಂಗ್ ದಾಸ್ (50) ಮತ್ತು ರಾಮನಿವಾಸ್ ಮೆಹರ್ (52) ಎಂಬುವವರಿಂದ ಪೊಲೀಸರು 33 ಕೆಜಿ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ, ಪಶುವೈದ್ಯರಿಂದ ಮಾಂಸ ಪರೀಕ್ಷೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

- Advertisement -

ಪಶುವೈದ್ಯರಿಂದ ಇನ್ನೂ ವರದಿ ಬಂದಿಲ್ಲವಾದ್ದರಿಂದ ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ.

Join Whatsapp