Home ಟಾಪ್ ಸುದ್ದಿಗಳು ವಿಧಾನಪರಿಷತ್‌ ಉಪ ಚುನಾವಣೆ: ಮತದಾನ ಪ್ರಗತಿಯಲ್ಲಿ

ವಿಧಾನಪರಿಷತ್‌ ಉಪ ಚುನಾವಣೆ: ಮತದಾನ ಪ್ರಗತಿಯಲ್ಲಿ

ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾ ಧಿಕಾರದ ಕ್ಷೇತ್ರದ ಉಪಚುನಾವಣೆಯ ಮತದಾನ ಪ್ರಗತಿಯಲ್ಲಿದೆ.

ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ ಚಲಾಯಿಸಿದರು. ಉಳಿದಂತೆ ಎಲ್ಲ ಪಂಚಾಯತ್ ಸದಸ್ಯರು, ಸ್ಥಳೀಯ ಸಂಸ್ಥೆಗಳ ಮತ ಚಲಾಯಿಸಲಿದ್ದಾರೆ.

ಚುನಾವಣ ಕಣದಲ್ಲಿ ಕಿಶೋರ್‌ ಬಿ.ಆರ್‌. (ಭಾರತೀಯ ಜನತಾ ಪಾರ್ಟಿ), ರಾಜು ಪೂಜಾರಿ ( ಕಾಂಗ್ರೆಸ್‌), ಅನ್ವರ್‌ ಸಾದತ್‌ ಎಸ್‌. (ಸೋಶಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ), ಮತ್ತು ದಿನಕರ ಉಳ್ಳಾಲ (ಪಕ್ಷೇತರ) ಸ್ಪರ್ಧಿಸುತ್ತಿದ್ದಾರೆ.

ಮತಗಟ್ಟೆ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು, ಜನಸಂದಣಿ ಗುಂಪು ಗುಂಪಾಗಿ ಜನ ಸೇರದಂತೆ ಸೂಚಿಸಲಾಗಿದೆ. ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂ ಧಿಸಿದಂತೆ ನಿಷೇಧಾಜ್ಞೆ ಹೊರಡಿಸಲಾಗಿದೆ. ಎಲ್ಲ ಮತಗಟ್ಟೆಗಳಿಗೆ ಭದ್ರತೆ ಸಂಬಂಧಿಸಿ ಒಟ್ಟು 540 ಪೊಲೀಸ್‌ ಅ ಧಿಕಾರಿ/ ಸಿಬಂದಿ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್‌ ಅಧಿ ಕಾರಿ/ಸಿಬಂದಿ ಕೂಡ ನಿಯೋಜಿಸಲಾಗಿದೆ.

Join Whatsapp
Exit mobile version