ಬೆಂಗಳೂರು: ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳ ಮತದಾನ ಶಾಂತಿಯುತವಾಗಿ ಮುಗಿದಿದೆ. ಶೇ. 79.91 ಮತದಾನವಾಗಿದೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಶೇ. 69.51, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಶೇ.65.86, ನೈರುತ್ಯ ಪದವೀಧರರ ಕ್ಷೇತ್ರ ಶೇ.78.19, ಆಗ್ನೇಯ ಶಿಕ್ಷಕರ ಕ್ಷೇತ್ರ ಶೇ. 95.27, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 82.56, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಶೇ. 88.07 ಮತದಾನವಾಗಿದೆ.
ಈ ಚುನಾವಣೆಯಲ್ಲಿ 78 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮೂರು ಪದವೀಧರರ ಕ್ಷೇತ್ರದಲ್ಲಿ 3,63,573 ಹಾಗೂ ಮೂರು ಶಿಕ್ಷಕರ ಕ್ಷೇತ್ರದಲ್ಲಿ 70,260 ಮತದಾರರು ಸೇರಿ ಒಟ್ಟು 4,33,833 ಮತದಾರರು ಮತದಾನದ ಹಕ್ಕು ಹೊಂದಿದ್ದರು.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 19, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 15, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಕಣದಲ್ಲಿದ್ದರು.
ಮತದಾನಕ್ಕೆ ಒಟ್ಟು ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ 461 ಮತ್ತು ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ 170 ಮತಗಟ್ಟೆ ಸ್ಥಾಪಿಸಲಾಗಿತ್ತು. ಜೂ.6 ಗುರುವಾರ ಫಲಿತಾಂಶ ಪ್ರಕಟವಾಗಲಿದೆ.