ವಿಧಾನ ಸಭೆ ಚುನಾವಣೆ: ಶೀಘ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ

Prasthutha|

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌’ನ ಸಂಭವನೀಯ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಲು ಕರ್ನಾಟಕ ಕಾಂಗ್ರೆಸ್‌’ನ ಕಾರ್ಯತಂತ್ರ ನಡೆಯುತ್ತಿದ್ದು, ಈ ಪಟ್ಟಿಯು ಶೀಘ್ರದಲ್ಲಿ ಮುಖ್ಯಸ್ಥರ ಕೈ ಸೇರಲಿದೆ.

- Advertisement -

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದು,  ಪಟ್ಟಿಯನ್ನು ಅಂತಿಮಗೊಳಿಸುವ ಕುರಿತಂತೆ ಕೆಲವು ಮುಖಂಡರ ಜೊತೆ ಚರ್ಚೆ ನಡೆಸಿದರು. 120ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಹುತೇಕ ಪೂರ್ಣಗೊಂಡಿದೆ.

ಮೊದಲ ಹಂತದ ಪಟ್ಟಿ ಸಿದ್ಧಪಡಿಸುವ ಕುರಿತು ಚುನಾವಣಾ ಸಮಿತಿಯ ಮಹತ್ವದ ಸಭೆ ಫೆ. 2ರಂದು ನಡೆಸಲಾಗಿತ್ತು. ಈ ಸಭೆಯಲ್ಲಿ 140 ಕ್ಷೇತ್ರಗಳಿಗೆ ಸಂಭವನೀಯರ ಪಟ್ಟಿ ಸಿದ್ದಪಡಿಸುವ ಬಗ್ಗೆ ಸಮಾಲೋಚನೆ ನಡೆದಿತ್ತು. ಆದರೆ ಆಕಾಂಕ್ಷಿಗಳಲ್ಲಿ ಗೊಂದಲ ನಿರ್ಮಾಣ ಆಗಬಹುದೆಂಬ ಕಾರಣಕ್ಕೆ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿರಲಿಲ್ಲ. ‘ಮೊದಲ ಪಟ್ಟಿಯನ್ನು ರಾಜ್ಯದಿಂದ ಕಳುಹಿಸುವ ಮೊದಲು ಎಚ್ಚರಿಕೆ ವಹಿಸಲು ನಾಯಕರು ಮುಂದಾಗಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಿದ ನಂತರವೇ ಮೊದಲ ಪಟ್ಟಿ ಹೈಕಮಾಂಡ್‌’ಗೆ ರವಾನೆ ಆಗಲಿದೆ’ ಎಂದು ಕಾಂಗ್ರೆಸ್ ನಾಯಕರೊಬ್ಬರು ತಿಳಿದರು.



Join Whatsapp