ಬೆಂಗಳೂರು: ಅತ್ಯಾಚಾರ ಕೇಸ್’ನಲ್ಲಿ ಬಂಧನದಲ್ಲಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ.
ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಮಹತ್ವದ ಹೇಳಿಕೆ ನೀಡಿದ್ದಾರೆ.
ವಿಧಾನಸೌಧ ಮತ್ತು ವಿಕಾಸಸೌದದಲ್ಲಿ ಮಾತ್ರವಲ್ಲದೇ ಸರ್ಕಾರಿ ಕಾರಿನಲ್ಲೂ ಸಹ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತ ಮಹಿಳೆ ಪೊಲೀಸರ ಮುಂದೆ ಹೇಳಿಕೆ ದಾಖಲಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದಾರೆ. ಕೋರ್ಟ್ ಆದೇಶದಂತೆ ಮುನಿರತ್ನರನ್ನ ವಶಕ್ಕೆ ಪಡೆದ ವಿಶೇಷ ತನಿಖಾ ದಳದ ಅಧಿಕಾರಿಗಳು ಆರೋಪಿಯ ವಿಚಾರಣೆ ಮಾಡುತ್ತಿದ್ದಾರೆ. ಮತ್ತೊಂದೆಡೆ ಸಂತ್ರಸ್ತ ಮಹಿಳೆ ಮುನಿರತ್ನ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳನ್ನು ಮಾಡಿದ್ದಾರೆ.