ತಮಿಳಿನ ಖ್ಯಾತ ನಟ ವಿಜಯ್ ಆ್ಯಂಟನಿ ಪುತ್ರಿ ಮೀರಾ ಆತ್ಮಹತ್ಯೆ

Prasthutha|

ಚೆನ್ನೈ: ತಮಿಳಿನ ಖ್ಯಾತ ನಟ ವಿಜಯ್ ಆ್ಯಂಟನಿ ಕುಟುಂಬದಲ್ಲಿ ಕಹಿ ಘಟನೆ ಒಂದು ನಡೆದಿದೆ. ಅವರ ಮಗಳು ಮೀರಾ ಇಂದು (ಸೆಪ್ಟೆಂಬರ್ 19) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮೀರಾ ಅವರಿಗೆ 16 ವರ್ಷ ವಯಸ್ಸಾಗಿತ್ತು.

- Advertisement -

ಅವರನ್ನು ಚೆನ್ನೈನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಯಾವುದೇ ಪ್ರಯೋಜನ ಆಗಿಲ್ಲ. ಮೀರಾ ಅವರು ಇಂದು ಮುಂಜಾನೆ ತಾವು ಇದ್ದ ರೂಂನಲ್ಲೇ ನೇಣು ಬಿಗಿದುಕೊಂಡಿದ್ದಾರೆ. ಖಾಸಗಿ ಶಾಲೆಯಲ್ಲಿ ಶಿಕ್ಷಣ ಪಡೆಯುತ್ತಿದ್ದ ಮೀರಾ ಹಲವು ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಈ ಸಾವಿನ ಕುರಿತು ತನಿಖೆ ಕೂಡ ನಡೆಯುತ್ತಿದೆ ಎಂದು ತಿಳಿದುಬಂದಿದೆ.

ನಟ ವಿಜಯ್ ಅವರು ಫಾತಿಮಾ ಅವರನ್ನು ಮದುವೆ ಆಗಿದ್ದರು. ಇವರಿಗೆ ಮೀರಾ ಹಾಗೂ ಲಾರಾ ಹೆಸರಿನ ಇಬ್ಬರು ಹೆಣ್ಣುಮಕ್ಕಳು.

- Advertisement -

ವಿಜಯ್ ಆ್ಯಂಟನಿ ಅವರು ಕಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ನಟನೆಯ ಜೊತೆಗೆ ಮ್ಯೂಸಿಕ್ ಕಂಪೋಸರ್ ಆಗಿಯೂ ಗುರುತಿಸಿಕೊಂಡಿದ್ದಾರೆ. ಮೊದಲು ಸಂಗೀತ ಸಂಯೋಜನೆ ಮಾಡಿದ ಅವರು ಬಳಿಕ ಹೀರೋ ಆದರು. ಅವರು ಸಿನಿಮಾ ನಿರ್ದೇಶನ ಹಾಗೂ ನಿರ್ಮಾಣ ಕೂಡ ಮಾಡಿದ್ದಾರೆ. ಫಾತಿಮಾ ಅವರು ನಿರ್ಮಾಣ ಸಂಸ್ಥೆಯನ್ನು ನೋಡಿಕೊಂಡು ಹೋಗುತ್ತಿದ್ದಾರೆ.