ಬಿಹಾರ ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ವಿಜಯ್ ಕುಮಾರ್ ಸಿನ್ಹಾ ರಾಜೀನಾಮೆ

Prasthutha|

ಪಾಟ್ನಾ: ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ‘ಮಹಾಘಟಬಂಧನ್’ ಮೈತ್ರಿ ಸರ್ಕಾರದ ವಿಶ್ವಾಸಮತ ಯಾಚನೆಗೂ ಮುನ್ನ ಭಾರತೀಯ ಜನತಾ ಪಕ್ಷದ ವಿಜಯ್ ಕುಮಾರ್ ಸಿನ್ಹಾ ಅವರು ಬುಧವಾರ ಬಿಹಾರ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

- Advertisement -

ಸಿನ್ಹಾ ಅವರ ಹೆಸರನ್ನು ಶಿಫಾರಸು ಮಾಡಿದ್ದ ಜೆಡಿಯುನ ನರೇಂದ್ರ ನಾರಾಯಣ್ ಯಾದವ್ ಅವರು ಈಗ ವಿಶ್ವಾಸಮತ ಯಾಚನೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಅವರ ವಿರುದ್ಧ ಆಡಳಿತಾರೂಢ ಮೈತ್ರಿಕೂಟದ ಶಾಸಕರು ಅವಿಶ್ವಾಸ ಗೊತ್ತುವಳಿ ಮಂಡಿಸಿದ ನಂತರ ಸಿನ್ಹಾ ಅವರ ರಾಜೀನಾಮೆ ಬಂದಿದೆ ಎಂದು ತಿಳಿದು ಬಂದಿದೆ.



Join Whatsapp