Home ಟಾಪ್ ಸುದ್ದಿಗಳು ವಿಜಯಪುರ: ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಾಕಲಾಗಿದ್ದ ಬ್ಯಾನರ್ ತೆರವು

ವಿಜಯಪುರ: ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದು ಹಾಕಲಾಗಿದ್ದ ಬ್ಯಾನರ್ ತೆರವು

ವಿಜಯಪುರ: ಉತ್ತರ ಕರ್ನಾಟಕದ ಪ್ರಖ್ಯಾತ ಸಿದ್ದೇಶ್ವರ ಜಾತ್ರೆಯ ವೇಳೆ ಮುಸ್ಲಿಮರಿಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬಾರದು ಎಂಬ ಬ್ಯಾನರ್ ವಿವಾದಕ್ಕೆ ಕಾರಣವಾಗಿತ್ತು. ಸದ್ಯ ಸಿದ್ದೇಶ್ವರ ಸಂಸ್ಥೆಯ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದಾರೆ.


ಸಿದ್ದೇಶ್ವರ ಜಾತ್ರೆಯಲ್ಲಿ ಅನ್ಯಕೋಮಿನವರಿಗೆ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬಾರದು ಎಂದು ಸಂಘಪರಿವಾರದ ಕಾರ್ಯಕರ್ತರು ಒಕ್ಕೂಟ ಪರವಾಗಿ ಸಿದ್ದೇಶ್ವರ ದೇವಸ್ಥಾನದ ಎದುರು ನಿನ್ನೆ ಬ್ಯಾನರ್ ಹಾಕಿದ್ದರು. ಬ್ಯಾನರ್ ತೆರವಿಗೆ ಸಿದ್ದೇಶ್ವರ ಸಂಸ್ಥೆಯ ಸಿಬ್ಬಂದಿ ಮುಂದಾದಾಗ ಶ್ರೀರಾಮ ಸೇನಾ ಸಂಘಟನೆ ಮುಖಂಡ ನೀಲಕಂಠ ಕಂದಗಲ್ ವಾಗ್ವಾದ ನಡೆಸಿದ್ದರು. ನಿನ್ನೆ ಬ್ಯಾನರ್ ತೆರವು ಮಾಡದಂತೆ ತಡೆದಿದ್ದರು. ಹೀಗಾಗಿ ನಿನ್ನೆ ಬ್ಯಾನರ್ ತೆರವು ಮಾಡದೇ ಸಿದ್ದೇಶ್ವರ ಸಂಸ್ಥೆಯ ಸಿಬ್ಬಂದಿ ವಾಪಸ್ ಹೋಗಿದ್ದರು. ಸದ್ಯ ತಡರಾತ್ರಿ ಪೊಲೀಸರ ಸಹಾಯದಿಂದ ಬ್ಯಾನರ್ ತೆರವು ಮಾಡಲಾಗಿದೆ.

Join Whatsapp
Exit mobile version