ವಿಜಯಪುರ ಜಿಲ್ಲೆಗೆ ಬಸವಣ್ಣನವರ ಹೆಸರು: 15 ದಿನದೊಳಗೆ ಅಭಿಪ್ರಾಯ ಸಲ್ಲಿಕೆಗೆ ಜಿಲ್ಲಾಡಳಿತದ ಗಡುವು

Prasthutha|

ವಿಜಯಪುರ: ವಿಶ್ವಕ್ಕೆ ಸಮಾನತೆ ಸಾರಿದ ಬಸವಣ್ಣನವರು ಜನಿಸಿದ ವಿಜಯಪುರ ಜಿಲ್ಲೆಗೆ ಬಸವ ಜಿಲ್ಲೆ ಅಥವಾ ಬಸವೇಶ್ವರ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಸಂಘ – ಸಂಸ್ಥೆಗಳು, ಗಣ್ಯ ವ್ಯಕ್ತಿಗಳಿಂದ ಅರ್ಜಿಗಳು ಸ್ವೀಕೃತವಾಗಿವೆ.

- Advertisement -


ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಗೆ ಬಸವಣ್ಣನವರ ಹೆಸರು ಮರು ನಾಮಕರಣ ಮಾಡಲು ಜಿಲ್ಲೆಯ ಜನಪ್ರತಿನಿಧಿ, ಗಣ್ಯವ್ಯಕ್ತಿಗಳ ಹಾಗೂ ಸಾರ್ವಜನಿಕರಿಂದ ಅಭಿಪ್ರಾಯ ಆಹ್ವಾನಿಸಲಾಗಿದೆ.


ಜಿಲ್ಲೆಗೆ ಮರು ನಾಮಕರಣ ಮಾಡುವ ಕುರಿತು 15 ದಿನಗಳೊಳಗಾಗಿ ಸ್ಪಷ್ಟ ಅಭಿಪ್ರಾಯವನ್ನು ಲಿಖಿತ ರೂಪದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp