ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ: ಮತದಾನ ಆರಂಭ

Prasthutha|

ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಆರಂಭವಾಗಿದ್ದು, 174 ಅಭ್ಯರ್ಥಿಗಳ ಭವಿಷ್ಯ ನಿರ್ಣಯವಾಗಲಿದೆ.

- Advertisement -


ಶುಕ್ರವಾರ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ವಿಜಯಪುರ ಮಹಾನಗರ ಪಾಲಿಕೆ ಚುನಾವಣೆ ಜೊತೆಗೆ ಅವಧಿ ಮುಕ್ತಾಯವಾಗಲಿರುವ ಗ್ರಾಮಪಂಚಾಯಿತಿಗಳಿಗೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸ್ಥಾನಗಳಿಗೂ ಇಂದು (ಅಕ್ಟೋಬರ್ 28) ಮತದಾನ ನಡೆಯುತ್ತಿದೆ.


ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಒಟ್ಟು 35 ವಾರ್ಡ್ ಗಳಿಗೆ ಚುನಾವಣೆ ನಡೆಯುತ್ತಿದ್ದು, ಒಟ್ಟು 174 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಈ ಪೈಕಿ ಬಿಜೆಪಿ 33 ವಾರ್ಡ್ ಗಳಲ್ಲಿ, ಕಾಂಗ್ರೆಸ್ ಎಲ್ಲಾ 35 ವಾರ್ಡ್ ಗಳಲ್ಲಿ ಸ್ಪರ್ಧಿಸುತ್ತಿದೆ. ಇನ್ನು ಜೆಡಿಎಸ್ 20 ವಾರ್ಡ್ ಗಳಲ್ಲಿ ಸ್ಪರ್ಧಿಸುತ್ತಿದೆ.



Join Whatsapp