ಚಿತ್ರದುರ್ಗ | ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ: ವಿಜಯೇಂದ್ರ ವಶಕ್ಕೆ

Prasthutha|

ಚಿತ್ರದುರ್ಗ: ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹ 187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ನೂರಾರು ಬಿಜೆಪಿ ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -


ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದಾಗ ಮಾತಿನ ಚಕಮಕಿ ಪಡೆಯಿತು. ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು ಬಿ.ವೈ.ವಿಜಯೇಂದ್ರ ಹಾಗೂ ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದರು.

Join Whatsapp