Home ಟಾಪ್ ಸುದ್ದಿಗಳು ಚಿತ್ರದುರ್ಗ | ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ: ವಿಜಯೇಂದ್ರ ವಶಕ್ಕೆ

ಚಿತ್ರದುರ್ಗ | ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ: ವಿಜಯೇಂದ್ರ ವಶಕ್ಕೆ

ಚಿತ್ರದುರ್ಗ: ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದ ₹ 187 ಕೋಟಿ ಹಣ ಲೂಟಿ ಹೊಡೆದಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿ ನೂರಾರು ಬಿಜೆಪಿ ಕಾರ್ಯಕರ್ತರನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬಿಜೆಪಿ ಕಾರ್ಯಕರ್ತರು ಬ್ಯಾರಿಕೇಡ್ ಮೇಲೇರಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ತಡೆದಾಗ ಮಾತಿನ ಚಕಮಕಿ ಪಡೆಯಿತು. ತಳ್ಳಾಟ, ನೂಕಾಟ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಅರಿತ ಪೊಲೀಸರು ಬಿ.ವೈ.ವಿಜಯೇಂದ್ರ ಹಾಗೂ ಮುಖಂಡರನ್ನು ವಶಕ್ಕೆ ಪಡೆದು ಕರೆದೊಯ್ದರು.

Join Whatsapp
Exit mobile version