ಬೆಂಗಳೂರು: ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಚಿವ ಸಂಪುಟ ಸೇರ್ಪಡೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಈ ಸಂಬಂಧ ಬಿಜೆಪಿ ವರಿಷ್ಠರು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪಗೆ ಭರವಸೆ ನೀಡಿದ್ದಾರೆ.ಬಿಜೆಪಿ ವರಿಷ್ಠರು ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಸೂಚನೆ ನೀಡಿದ್ದು, ಪಕ್ಷದ ಕಚೇರಿಯಲ್ಲಿ ಕೋರ್ ಕಮಿಟಿ ನಡೆಯುತ್ತಿದೆ. ಕೋರ್ ಕಮಿಟಿ ಸಭೆಯಲ್ಲೂ ಈ ವಿಚಾರ ಚರ್ಚೆ ನಡೆಯಲಾಗುತ್ತಿದ್ದು, ವಿಜಯೇಂದ್ರ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರಗೆ ಅವಕಾಶ ಕಲ್ಪಿಸಲಾಗಿದ್ದು ಜೂನ್ನಲ್ಲಿ ಪರಿಷತ್ ನ 7 ಸ್ಥಾನಗಳಿಗೆ ನಡೆಯಲಿರುವ ಎಂಎಲ್ಸಿ ಎಲೆಕ್ಷನ್ನಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ತಂತ್ರವಾಗಿದೆ.
ಬಿಎಸ್ ಯಡಿಯೂರಪ್ಪ,ವಿಜಯೇಂದ್ರ ಅವರರಿಗೆ MLC ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದು, ಲಿಂಗಾಯತ ಮತ ಬ್ಯಾಂಕ್ ಉಳಿಸಿಕೊಳ್ಳಲು ಪ್ಲಾನ್ ಮಾಡಿದ್ದರು. ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ವೈ ಒತ್ತಡ ಹಾಕಿದ್ದು, ಹೀಗಾಗಿ ಬಿಜೆಪಿ ವರಿಷ್ಠರು ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸುವಂತೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.