Home ಟಾಪ್ ಸುದ್ದಿಗಳು ವಿಜಯೇಂದ್ರ ಭ್ರಷ್ಟ, ಆತನ ನಾಯಕತ್ವಕ್ಕೆ ನನ್ನ ವಿರೋಧ: ರಮೇಶ್ ಜಾರಕಿಹೊಳಿ ಕಿಡಿ

ವಿಜಯೇಂದ್ರ ಭ್ರಷ್ಟ, ಆತನ ನಾಯಕತ್ವಕ್ಕೆ ನನ್ನ ವಿರೋಧ: ರಮೇಶ್ ಜಾರಕಿಹೊಳಿ ಕಿಡಿ

ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷನಾಗಿ ಬಿ.ವೈ. ವಿಜಯೇಂದ್ರ ಅವರನ್ನು ನಾನೆಂದೂ ಒಪ್ಪೋದಿಲ್ಲ. ಮುಂದಿನ ಅಧ್ಯಕ್ಷ ಯಾರು ಎಂಬುದು ಪಕ್ಷದ ವರಿಷ್ಠರು ತೀರ್ಮಾನ ಮಾಡಬೇಕು. ವಿಜಯೇಂದ್ರ ಬಿಜೆಪಿ ಪಕ್ಷದಲ್ಲಿ ಇನ್ನೂ ಜೂನಿಯರ್, ಅವನಿಗೆ ಏನೂ ಐಡಿಯಾಲಜಿ ಇಲ್ಲ ಎಂದು ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಆಕ್ರೋಶ ಹೊರಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ. ಅವನು ಅಧ್ಯಕ್ಷ ಆಗಿದ್ದಕ್ಕೆ ನನಗೆ ವಿರೋಧವಿದೆ. ಹಾಗಂತ ನಾನೆಂದೂ ಯಡಿಯೂರಪ್ಪನವರಿಗೆ ವಿರೋಧಿ ಅಲ್ಲ. ಯಡಿಯೂರಪ್ಪ ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ, ವಿಜಯೇಂದ್ರ ನಮ್ಮ ಪಕ್ಷದ ನಾಯಕನಲ್ಲ ಎಂದು ತಮ್ಮದೇ ಪಕ್ಷದ ರಾಜ್ಯಾಧ್ಯಕ್ಷರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆರ್​ಎಸ್ಎಸ್ ಪ್ರಮುಖ ನಾಯಕರು, ಬಿಜೆಪಿ ನಾಯಕರ ಸಭೆಯ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿನ ಶಾಸಕ ರಮೇಶ್ ಜಾರಕಿಹೊಳಿ, ಸಭೆಯಲ್ಲಿ ಏನು ಚರ್ಚೆಯಾಯಿತು ಎಂದು ಹೇಳುವುದಕ್ಕೆ ಆಗುವುದಿಲ್ಲ. ತಪ್ಪು ಮಾಡಿದವರನ್ನು ಸಭೆಯಲ್ಲಿ ಮುಖಂಡರು ಬೈದಿದ್ದಾರೆ ಅಷ್ಟೇ. 15ರಿಂದ 20 ಜನರ ಸಾಮೂಹಿಕ ನಾಯಕತ್ವದಲ್ಲಿ ಮುನ್ನಡೆಸಲಿ ಎಂದು ಬಿಜೆಪಿ, ಆರ್​ಎಸ್​ಎಸ್​ ಪ್ರಮುಖರ ಸಭೆಯಲ್ಲಿ ಮನವಿ ಮಾಡಿದ್ದೇವೆ. ವರಿಷ್ಠರು ನೀವು ಇಂತಿಂಥ ಕೆಲಸ ಮಾಡುವಂತೆ ಟಾಸ್ಕ್ ನೀಡಿದ್ದಾರೆ. 120ರಿಂದ 130 ಕ್ಷೇತ್ರಗಳನ್ನು ಗೆಲ್ಲಿಸಿಕೊಡುವ ಶಕ್ತಿ ನಮ್ಮಲ್ಲಿದೆ. ವರಿಷ್ಠರು ನೀಡಿದ ಟಾಸ್ಕ್​ನಲ್ಲಿ ನಾನು ವಿಫಲನಾದರೆ ನನ್ನನ್ನು ಒದ್ದು ಹೊರಹಾಕಿ ಎಂದು ಸಂಘ ಪರಿವಾರದ ಪ್ರಮುಖರ ಸಭೆಯಲ್ಲಿ ಹೇಳಿದ್ದೇನೆ ಎಂದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

Join Whatsapp
Exit mobile version