Home ಟಾಪ್ ಸುದ್ದಿಗಳು ನನ್ನ ಜೊತೆ ವಿಜಯೇಂದ್ರ ಮಂಪರು ಪರೀಕ್ಷೆ ಲೈವ್ ಆಗಿ ನಡೆಯಬೇಕು: ಬಿ.ಕೆ ಹರಿಪ್ರಸಾದ್

ನನ್ನ ಜೊತೆ ವಿಜಯೇಂದ್ರ ಮಂಪರು ಪರೀಕ್ಷೆ ಲೈವ್ ಆಗಿ ನಡೆಯಬೇಕು: ಬಿ.ಕೆ ಹರಿಪ್ರಸಾದ್

ನವದೆಹಲಿ: ನನ್ನ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಮಂಪರು ಪರೀಕ್ಷೆ ಲೈವ್ ಆಗಿ ನಡೆದು ಟಿವಿಯಲ್ಲಿ ಪ್ರಸಾರ ಮಾಡಬೇಕು ಎಂದು ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಸವಾಲು ಹಾಕಿದ್ದಾರೆ.

ರಾಮಮಂದಿರ ಉದ್ಘಾಟನೆ ವೇಳೆ ಗೋದ್ರಾ ತರಹದ ಘಟನೆ ಸಂಭವಿಸಬಹುದು ಎಂದು ಕೆಲ ದಿನಗಳ ಹಿಂದೆ ಬಿ.ಕೆ ಹರಿಪ್ರಸಾದ್ ಅವರು ಹೇಳಿದ್ದರು. ಹರಿಪ್ರಸಾದ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿ.ವೈ ವಿಜಯೇಂದ್ರ ಅವರು ಪ್ರತಿಕ್ರಿಯಿಸಿದ್ದರು.

ವಿಜಯೇಂದ್ರ ಹೇಳಿಕೆಗೆ ನವದೆಹಲಿಯಲ್ಲಿ ಪ್ರತಿಕ್ರಿಯಿಸಿದ ಹರಿಪ್ರಸಾದ್, ಬಿಜೆಪಿ ರಾಜ್ಯಾಧ್ಯಕ್ಷರಾಗಿರುವ ಬಿ.ವೈ ವಿಜಯೇಂದ್ರ ಅವರು ಹುಮ್ಮಸ್ಸಿನಲ್ಲಿ ಹೇಳಿರುವುದನ್ನೇ ಹೇಳುತ್ತಿದ್ದಾರೆ. ಕೋವಿಡ್ ಸಂದರ್ಭದಲ್ಲಿ 40,000 ಕೋಟಿ ರೂ. ಹಗರಣ ನಡೆದಿದೆ ಎಂದು ಬಿಜೆಪಿ ನಾಯಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ. ಆದ್ದರಿಂದ ವಿಜಯೇಂದ್ರ ಅವರನ್ನು ನನ್ನ ಜೊತೆಗೆ ಲೈವ್ ಆಗಿ ಮಂಪರು ಪರೀಕ್ಷೆಗೆ ಒಳಪಡಿಸುವುದಾದರೆ ನಾನು ಮಂಪರು ಪರೀಕ್ಷೆಗೆ ಒಳಪಡಲು ಸಿದ್ಧ ಎಂದು ಕಿಡಿಕಾರಿದ್ದಾರೆ.

Join Whatsapp
Exit mobile version