ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಲಿ: ಬಿಜೆಪಿ ಶಾಸಕ ಆಗ್ರಹ

Prasthutha|

ದಾವಣಗೆರೆ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಶಿಕಾರಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮರುಚುನಾವಣೆ ಎದುರಿಸಬೇಕು. ಚುನಾವಣೆಯ ಗೆಲುವು ಕಾಂಗ್ರೆಸ್ ಭಿಕ್ಷೆಯಲ್ಲ ಬಿಜೆಪಿಯ ಶಕ್ತಿ ಎಂಬುದನ್ನು ನಿರೂಪಿಸಬೇಕು ಎಂದು ಹರಿಹರ ಶಾಸಕ ಬಿ.ಪಿ.ಹರೀಶ್ ಒತ್ತಾಯಿಸಿದರು.

- Advertisement -


ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ‘ಬಿ.ವೈ.ವಿಜಯೇಂದ್ರ ಶಾಸಕ ಸ್ಥಾನ ಕಾಂಗ್ರೆಸ್ ಭಿಕ್ಷೆ’ ಎಂಬ ಗಂಭೀರ ಆರೋಪವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಡಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವಿನ ಹೊಂದಾಣಿಕೆ ರಾಜಕಾರಣದ ಆರೋಪಕ್ಕೆ ಇದು ಪುಷ್ಟಿ ನೀಡಿದೆ. ಇಂತಹ ಬ್ಲ್ಯಾಕ್ ಮೇಲ್ ಗೆ ಬಿ.ಎಸ್.ಯಡಿಯೂರಪ್ಪ ಕುಟುಂಬ ಸರಿಯಾಗಿ ಪ್ರತಿಕ್ರಿಯಿಸಬೇಕು ಎಂದರು.


ಕಾಂಗ್ರೆಸ್ ಭಿಕ್ಷೆಯಿಂದ ಶಾಸಕರಾಗುವ ಅನಿವಾರ್ಯತೆ ಬಿಜೆಪಿ ನಾಯಕರಿಗೆ ಇಲ್ಲ ಎಂಬುದನ್ನು ತೋರಿಸಬೇಕು’ ಎಂದು ಹೇಳಿದ್ದಾರೆ.



Join Whatsapp