Home ಟಾಪ್ ಸುದ್ದಿಗಳು ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ: ಬುಧವಾರ ಅಂತ್ಯಕ್ರಿಯೆ

ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹ ನಾಳೆ ಬೆಂಗಳೂರಿಗೆ: ಬುಧವಾರ ಅಂತ್ಯಕ್ರಿಯೆ

ಬೆಂಗಳೂರು: ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರ ಮರಣೋತ್ತರ ಪರೀಕ್ಷೆ ಬ್ಯಾಂಕಾಕ್ ನಲ್ಲಿ ಮುಗಿದಿದ್ದು, ಮೃತ ದೇಹವನ್ನು ನಾಳೆ ಸಾಯಂಕಾಲ ಬೆಂಗಳೂರಿಗೆ ತರಲಾಗುವುದು ಎಂದು ಸ್ಪಂದನಾ ಚಿಕ್ಕಪ್ಪ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.


ಇಂದು ಮರಣೋತ್ತರ ಪರೀಕ್ಷೆ ಮುಗಿದಿದ್ದರೂ, ಇನ್ನೂ ಹಲವು ವಿದೇಶಿ ವಿಧಿವಿಧಾನಗಳು ನಡೆಯಬೇಕಿವೆ. ಅವು ನಾಳೆ ಮಧ್ಯಾಹ್ನ ಪೂರ್ಣಗೊಳ್ಳಲಿವೆಯಂತೆ ಎಂದಿದ್ದಾರೆ.


ಸ್ಪಂದನಾ ಸಾವಿನ ಕುರಿತಂತೆ ಬ್ಯಾಂಕಾಕ್ ವಿಧಿವಿಧಾನ ಮುಗಿಯಲು ನಾಳೆ ಮಧ್ಯಾಹ್ನ ಆಗುತ್ತದೆ. ಆದ್ದರಿಂದ ವಿಧಿ ವಿಧಾನ ಮುಗಿಸಿ ಮೃತದೇಹ ಸಂಜೆ ಹೊರಡಲಾಗುತ್ತದೆ. ರಾತ್ರಿಯ ಒಳಗೆ ಮೃತ ದೇಹ ಬೆಂಗಳೂರಿಗೆ ಬರಲಿದೆ. ಬೆಂಗಳೂರಿನಿಂದ ಕೆಲವರು ಅಲ್ಲಿಗೆ ಹೋಗೋಣ ಎಂದುಕೊಂಡಿದ್ದೆವು. ಆದ್ರೆ ನಾವು ಹೋಗೋ ಅಷ್ಟರಲ್ಲಿ ಸಮಯ ಆಗುತ್ತೆ. ಆದ್ರಿಂದ ನಾವ್ಯಾರೂ ಇಲ್ಲಿಂದ ಹೋಗ್ತಾ ಇಲ್ಲ. ನಾಳೆ ರಾತ್ರಿ 11:30ರ ಹೊತ್ತಿಗೆ ಮೃತ ದೇಹ ಬರಬಹುದು. ಬುಧವಾರ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ’ ಎಂದರು.

Join Whatsapp
Exit mobile version