ಮಂಗಳೂರು | ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ವಿಖ್ಯಾತ್, ಪತ್ನಿ ಅರೆಸ್ಟ್

Prasthutha|

ಮಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಆರೋಪಿ ಹಾಗೂ ಆತನ ಪತ್ನಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ವಿಖ್ಯಾತ್ (28), ಅಂಜನಾ(21) ಎಂದು ಗುರುತಿಸಲಾಗಿದೆ.

ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ ಐ ರಾಜೇಂದ್ರ ಬಿ ನೇತ್ರತ್ವದ ಮಂಗಳೂರು ಸಿಸಿಬಿ ಪೊಲೀಸರು, ಮಂಗಳೂರಿನ ನಗರದ ಕಾವೂರು ಶಂಕರ ನಗರ ಕೆ ಸಿ ಆಳ್ವ ಲೇಔಟ್ ನ ಮನೆಯೊಂದಕ್ಕೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಬಂಧಿತರಿಂದ ಒಟ್ಟು 2.200 ಕೆ ಜಿ ತೂಕದ ರೂ. 22,000, ಮೌಲ್ಯದ ಗಾಂಜಾ, ನಗದು ರೂ. 1,500 ಮೊಬೈಲ್ ಫೋನ್-1 ಮತ್ತು ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

Join Whatsapp
Exit mobile version