ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್ ಹೃದಯಾಘಾತದಿಂದ ನಿಧನ

Prasthutha|

ಬೆಂಗಳೂರು: ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಸಂಸ್ಥೆಯ ಉಪಾಧ್ಯಕ್ಷ ವಿಕ್ರಂ ಕಿರ್ಲೋಸ್ಕರ್ ಕಳೆದ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ನಿನ್ನೆ ವಿಕ್ರಮ್ ಅವರಿಗೆ ಲಘು ಹೃದಯಾಘಾತವಾದ್ದರಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕಳೆದ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ,ಮೂಲಗಳು ತಿಳಿಸಿವೆ.

- Advertisement -

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ವಿಕ್ರಮ್ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -