ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3ರ ಲ್ಯಾಂಡರ್ ವಿಕ್ರಮ್ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದೆ.
ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ ಮಾಡ್ಯೂಲ್ ನಿಂದ ಲ್ಯಾಂಡರ್ ಮ್ಯಾಡ್ಯೂಲ್ ಬೇರ್ಪಟ್ಟಿದ್ದು, ಆಗಸ್ಟ್ 23ರಂದು ಚಂದ್ರನ ಮೇಲೆ ಇಳಿಯಲು ಸಜ್ಜಾಗಿದೆ ಇಸ್ರೋ ತಿಳಿಸಿದೆ.
ಈ ಮಾಹಿತಿಯನ್ನು ಟ್ವಿಟ್ಟರ್ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿರುವ ಇಸ್ರೋ, ಲ್ಯಾಂಡರ್ ಮ್ಯಾಡ್ಯೂಲ್, ಪ್ರೊಪಲ್ಷನ್ ಮಾಡ್ಯೂಲ್ ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ನಾಳೆಗೆ ಯೋಜಿಸಲಾದ 1,600 ಗಂಟೆಗಳ ಡಿಬೂಸ್ಟಿಂಗ್ ನಂತರ ಚಂದ್ರನ ಮೇಲೆ ಲ್ಯಾಂಡರ್ ಇಳಿಯಲಿದೆ. ಪ್ರೊಪಲ್ಷನ್ ಮಾಡ್ಯೂಲ್ ತಿಂಗಳುಗಳ ಕಾಲ ಅಥವಾ ವರ್ಷಗಳ ವರೆಗೆ ಪ್ರಸ್ತುತ ಕಕ್ಷೆಯಲ್ಲೇ ತನ್ನ ಪ್ರಯಾಣ ಮುಂದುವರಿಸಲಿದೆ ಎಂದು ಮಾಹಿತಿ ಹಂಚಿಕೊಂಡಿದೆ.