ಕೋವಿಡ್ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆಗೆ ಬಂದ ಪೊಲೀಸರನ್ನು ಥಳಿಸಿದ ಗ್ರಾಮಸ್ಥರು!

Prasthutha|

ಒಡಿಶಾ : ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ವೃದ್ಧರೊಬ್ಬರ ಶವವನ್ನು ಅಂತ್ಯಕ್ರಿಯೆ ನಡೆಸಲು ಬಂದ ಪೊಲೀಸರು ಮತ್ತು ಅಧಿಕಾರಿಗಳನ್ನು ಗ್ರಾಮಸ್ಥರು ಥಳಿಸಿರುವ ಆಘಾತಕಾರಿ ಘಟನೆ ಒಡಿಶಾದ ಸೋನಾರಿಪೊಸಿ ಗ್ರಾಮದಲ್ಲಿ ನಡೆದಿದೆ.

- Advertisement -

ಪೊಲೀಸರು ಮತ್ತು ಅಧಿಕಾರಿಗಳು ಗ್ರಾಮದಲ್ಲಿ ಕರೋನಾ ವೈರಸ್ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಸ್ಥಳೀಯರ ಆರೋಪ. ಘಟನೆಯ ಬಗ್ಗೆ ಪ್ರಕರಣ ದಾಖಲಾಗಿದ್ದು, ಏಳು ಮಂದಿಯನ್ನು ನ್ಯಾಯಾಂಗ ಬಂಧನದಲ್ಲಿಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಗ್ರಾಮದ ವೃದ್ಧರೊಬ್ಬರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದು, ವೃದ್ಧನ ಅಂತ್ಯಕ್ರಿಯೆ ನಡೆಸಲು ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿದ್ದರು. ಆದರೆ, ಕೊರೋನಾ ಸೋಂಕು ಇನ್ನೂ ಗ್ರಾಮದಲ್ಲಿ ಹರಡಿಲ್ಲ ಎಂದು ಸ್ಥಳೀಯರು ನಂಬಿದ್ದರು. ಕೋವಿಡ್ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯಕ್ರಿಯೆ ನಡೆಸಿದರೆ ಕೊರೋನಾ ಗ್ರಾಮದಲ್ಲೆಡೆ ವ್ಯಾಪಕವಾಗಿ ಹರಡಬಹುದೆಂದು ಆರೋಪಿಸಿ ಪೊಲೀಸರು ಮತ್ತು ಅಧಿಕಾರಿಗಳನ್ನು ತಡೆದ ಗ್ರಾಮಸ್ಥರು ಥಳಿಸಿದ್ದಾರೆ ಎನ್ನಲಾಗಿದೆ.

Join Whatsapp