ಸುಳ್ಯ: ಸ್ವಂತ ಖರ್ಚಿನಲ್ಲೇ ಸೇತುವೆ ನಿರ್ಮಿಸಿದ ಗ್ರಾಮಸ್ಥರು!

Prasthutha|

ಪ್ರಧಾನಿ ಮೋದಿಗೆ ಮನವಿ ಮಾಡಿದ್ದರೂ ಈಡೇರದ ಸೇತುವೆ ಬೇಡಿಕೆ

- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಜನರು ಸ್ವಂತ ಖರ್ಚಿನಲ್ಲೇ ಒಂದು ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಳೆಗೆ ತಾತ್ಕಾಲಿಕ ಕಬ್ಬಿಣದ ಸೇತುವೆ ನಿರ್ಮಿಸಿದ್ದು, ಈ ಮೂಲಕ ಹಲವು ದಶಕಗಳಿಂದ ಎದುರಿಸುತ್ತಿದ್ದ ತೀವ್ರ ಸಮಸ್ಯೆಗೆ ಮುಕ್ತಿ ಸಿಕ್ಕಿದಂತಾಗಿದೆ.

ಮಳೆಗಾಲದಲ್ಲಿ ಹೊಳೆ ದಾಟಲು ಕಷ್ಟ ಪಡುತ್ತಿದ್ದ ಗ್ರಾಮಸ್ಥರು ಶಾಶ್ವತ ಸೇತುವೆ ಬೇಕೆಂದು ಶಾಸಕ-ಸಚಿವರುಗಳಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ಸಿಗದ ಕಾರಣ ನೇರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದರೂ ಪ್ರಯೋಜನಕಾರಿಯಾಗಲಿಲ್ಲ.

ಸಚಿವ ಎಸ್ ಅಂಗಾರ ಪ್ರತಿನಿಧಿಸುವ ಸುಳ್ಯ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಊರಿನ ಮಂದಿ ನೂರಾರು ಬಾರಿ ಮನವಿ ಮಾಡಿದರೂ ಯಾರು ಗಣನೆಗೆ ತೆಗೆದುಕೊಳ್ಳಲಿಲ್ಲ ಎಂದು ತಿಳಿದು ಬಂದಿದೆ. ಇದರಿಂದ ಬೇಸತ್ತು ಗ್ರಾಮಸ್ಥರೇ ತಮ್ಮ ಸ್ವಂತ ಖರ್ಚಿನಲ್ಲಿ ಸೇತುವೆ ನಿರ್ಮಿಸುವ ಮೂಲಕ ಸಮಸ್ಯೆ ಬಗೆಹರಿಸಿದ್ದಾರೆ.

Join Whatsapp