Home ಟಾಪ್ ಸುದ್ದಿಗಳು ಶಾಸಕ ಸಿ.ಟಿ.ರವಿ ಕ್ಷೇತ್ರದಲ್ಲಿ ಮತದಾರರಿಗೆ ಹಂಚಿದ್ದ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ಶಾಸಕ ಸಿ.ಟಿ.ರವಿ ಕ್ಷೇತ್ರದಲ್ಲಿ ಮತದಾರರಿಗೆ ಹಂಚಿದ್ದ ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು

ಚಿಕ್ಕಮಗಳೂರು: ಶಾಸಕ ಸಿ.ಟಿ.ರವಿ ಪ್ರತಿನಿಧಿಸುವ ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಮನೆಗೆ ವಿತರಿಸಿದ್ದು, ಗ್ರಾಮಸ್ಥರೊಬ್ಬರು ಸೀರೆಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಭಕ್ತರಹಳ್ಳಿಯಲ್ಲಿ ಗ್ರಾಮಸ್ಥರೊಬ್ಬರು ಬಿಜೆಪಿ ವಿತರಿಸಿದ ಸೀರೆಗೆ ಬೆಂಕಿ ಹೊತ್ತಿಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ವೋಟು ಹಾಕಿ ಗೆಲ್ಲಿಸಿದ್ದೇವೆ, ಊರಿಗೆ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ನನ್ನ ಹೆಂಡತಿ, ತಾಯಿಗೆ ಸೀರೆ ಕೊಟ್ಟಿದ್ದಾರೆ. ಇದೇ ನಮಗೆ ನೀಡಿರುವ ಸೌಲಭ್ಯ. ಈ ಸೌಲಭ್ಯ ಬಿಟ್ಟರೆ ಬೇರೆ ಏನೂ ಕೊಟ್ಟಿಲ್ಲ ಎಂದು ಗ್ರಾಮಸ್ಥ ಯೋಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version