ಮತಯಂತ್ರಗಳನ್ನು ಪುಡಿಪುಡಿ ಮಾಡಿದ ಗ್ರಾಮಸ್ಥರು

Prasthutha|

ವಿಜಯಪುರ: ಮತಯಂತ್ರಗಳನ್ನು ಗ್ರಾಮಸ್ಥರೇ ಒಡೆದು ಪುಡಿಪುಡಿ ಮಾಡಿದ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.

- Advertisement -


ಮತಯಂತ್ರ ಕೆಟ್ಟಲ್ಲಿ ಬಳಕೆಗೆ ಎಂದು ರಿಸರ್ವ್ ಇಡಲಾಗಿದ್ದ ಇವಿಎಂ, ವಿವಿಪ್ಯಾಟ್ ಮಶೀನ್ ಗಳಾಗಿದ್ದವು. ಅವುಗಳನ್ನು ಸಿಬ್ಬಂದಿಯು ವಾಪಸ್ ತರೋದನ್ನು ಗಮನಿಸಿ ಜನರು ಪ್ರಶ್ನಿಸಿದ್ದಾರೆ. ಈ ವೇಳೆ ಸಿಬ್ಬಂದಿ ಸರಿಯಾಗಿ ಉತ್ತರಿಸದೇ ಇದ್ದಾಗ ತಪ್ಪು ಭಾವಿಸಿ ಮತಯಂತ್ರ ಒಡೆದು ಹಾಕಿದ್ದಾರೆ.


ಜೊತೆಗೆ ಅಧಿಕಾರಿಗಳ ಕಾರನ್ನು ಜಖಂಗೊಳಿಸಿದ್ದಾರೆ. ಸಿಬ್ಬಂದಿಗಳ ಮೇಲೂ ಹಲ್ಲೆ ಮಾಡಲಾಗಿದೆ. ಮಸಬಿನಾಳ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.



Join Whatsapp