ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆ: ಮಾಜಿ ಸಚಿವನಿಗೆ ಕಾರ್ಯಕರ್ತ ರಿಂದ ಭರ್ಜರಿ ಸ್ವಾಗತ

Prasthutha|

ಬೆಳಗಾವಿ: ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು.

- Advertisement -

ಜೈಲಿನ ಮುಂದೆ ಸೇರಿದ್ದ ಬೆಂಬಲಿಗರು ಹೂ -ಮಳೆ ಸುರಿಸುವ ಮೂಲಕ ಮಾಜಿ ಸಚಿವರಿಗೆ ಭರ್ಜರಿ ಸ್ವಾಗತ ನೀಡಿದ್ದಾರೆ.

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೀಡಾಗಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಕಳೆದ 6 ತಿಂಗಳಿಂದ ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಸೆರೆವಾಸ ಅನುಭವಿಸಿದ್ದರು. ಕಳೆದ ಆಗಸ್ಟ್ 11ರಂದು ಸುಪ್ರೀಂಕೋರ್ಟ್ ಕೊಲೆ ಆರೋಪ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ನೀಡಿತ್ತು. ಆದರೆ, ಸಾಕ್ಷ್ಯ ನಾಶ ಪ್ರಕರಣದಲ್ಲಿ ಜಾಮೀನು ಸಿಕ್ಕರಲಿಲ್ಲ.

- Advertisement -

ಆಗಸ್ಟ್ 19 ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ ಸಾಕ್ಷ್ಯ ನಾಶ ಆರೋಪ ಪ್ರಕರಣದಲ್ಲಿಯೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಜಾಮೀನು ಆದೇಶದ ಪ್ರತಿ ಜೈಲು ಅಧಿಕಾರಿಗಳ ಕೈ ಸೇರಿದ ಬಳಿಕ ವಿನಯ್ ಕುಲಕರ್ಣಿ ಜೈಲಿನಿಂದ ಹೊರಬಂದಿದ್ದಾರೆ.



Join Whatsapp