ಉಡುಪಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಅವರು ಹೆಲಿಕಾಪ್ಟರ್ ಮೂಲಕ ಉಡುಪಿಗೆ ಅಪಾರ ಪ್ರಮಾಣದ ಹಣವನ್ನು ತಂದಿದ್ದಾರೆ ಎಂದು ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಆರೋಪಿಸಿದ್ದಾರೆ.
ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರ ನಾಮಪತ್ರ ಸಲ್ಲಿಕೆ ಸಮಾರಂಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, ನನಗೆ ಸಿಕ್ಕಿರುವ ಮಾಹಿತಿಯಂತೆ ಇಂದು ಅಣ್ಣಾಮಲೈ ಅವರ ಹೆಲಿಕಾಪ್ಟರ್ ಮೂಲಕ ನಮ್ಮ ಜಿಲ್ಲೆಗೆ ಹಣದ ಗಂಟು ರವಾನೆಯಾಗಿದೆ. ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆಯೇ ಪಟಾಕಿ ಸಿಡಿಸಿರುವ ಇವರು ಒಂದು ವೇಳೆ ಗೆದ್ದರೆ ಬಾಂಬ್ ಸ್ಫೋಟಿಸಬಹುದು. ಚುನಾವಣೆ ಘೋಷಣೆಗೂ ಮುನ್ನವೇ ನಾವು ನಾಲ್ಕು ಗ್ಯಾರಂಟಿಗಳನ್ನು ಘೋಷಿಸಿದ್ದೇವೆ. ಸುಳ್ಳು ಆರೋಪಗಳಿಂದ ಕಳೆದ ನಾವು ಸೋತಿದ್ದೇವೆ ಎಂದು ಸೊರಕೆ ಹೇಳಿದ್ದಾರೆ.