ನವದೆಹಲಿ: ನೇಪಾಳದಲ್ಲಿ ಭಾರತದ ರಾಯಭಾರಿಯಾಗಿರುವ ವಿನಯ್ ಮೋಹನ್ ಕ್ವಾತ್ರಾ ಅವರನ್ನು ನೂತನ ವಿದೇಶಾಂಗ ಕಾರ್ಯದರ್ಶಿಯಾಗಿ ಕೇಂದ್ರ ಸರಕಾರ ಸೋಮವಾರ ನೇಮಿಸಿದೆ. ಕ್ವಾತ್ರಾ ಈ ತಿಂಗಳ ಕೊನೆಯಲ್ಲಿ ನಿವೃತ್ತರಾಗಲಿರುವ ಹರ್ಷ್ ವರ್ಧನ್ ಶ್ರಿಂಗ್ಲಾ ಅವರ ಉತ್ತರಾಧಿಕಾರಿಯಾಗಿದ್ದಾರೆ.
ಏಪ್ರಿಲ್ 30, 2022 ರಂದು ಶ್ರಿಂಗ್ಲಾ ಅವರ ನಿವೃತ್ತಿಯ ನಂತರ ವಿದೇಶಾಂಗ ಕಾರ್ಯದರ್ಶಿ ಹುದ್ದೆಗೆ ಕ್ವಾತ್ರಾ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದಿಸಿದೆ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.