ವಿನೇಶ್ ಫೋಗಟ್, ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ

Prasthutha|

ನವದೆಹಲಿ: ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

- Advertisement -


ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ನಾಯಕರಾದ ಪವನ್ ಖೇರಾ, ಹರಿಯಾಣ ಕಾಂಗ್ರೆಸ್ ಘಟಕದ ಅಧ್ಯಕ್ಷ ಉದಯ್ ಭಾನ್, ಹರಿಯಾಣದ ಎಐಸಿಸಿ ಉಸ್ತುವಾರಿ ದೀಪಕ್ ಬಾಬರಿಯಾ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.


ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಈ ಇಬ್ಬರೂ ಸ್ಪರ್ಧಿಸುವ ಸಾಧ್ಯತೆ ಇದೆ.

- Advertisement -


ಇದಕ್ಕೂ ಮುನ್ನ ಅವರು, ದೆಹಲಿಯಲ್ಲಿರುವ ಮಲ್ಲಿಕಾರ್ಜುನ ಖರ್ಗೆಯವರ 10 ರಾಜಾಜಿ ಮಾರ್ಗ್ ನಿವಾಸದಲ್ಲೇ ಖರ್ಗೆ ಅವರು ಮತ್ತು ಕಾಂಗ್ರೆಸ್ನ ಹಿರಿಯ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.



Join Whatsapp
Exit mobile version