ನವದೆಹಲಿ: ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅವರ ಅನರ್ಹ ಪ್ರಕರಣಕ್ಕೆ ಸಂಬಂಧಪಟ್ಟ ತೀರ್ಪನ್ನು ಮಧ್ಯಸ್ಥಿಕೆ ನ್ಯಾಯಾಲಯ (ಸಿಎಎಸ್) ಮತ್ತೆ ಮುಂದೂಡಿದೆ.
16ರ ತನಕ ಕಾದಿರಿಸಿದೆ ಎಂದು ಐಒಎ ತಿಳಿಸಿದೆ. ತನಗೆ ಜಂಟಿ ಬೆಳ್ಳಿ ಪದಕ ನೀಡುವಂತೆ ವಿನೇಶ್ ಫೋಗಾಟ್ ಅರ್ಜಿ ಸಲ್ಲಿಸಿದ್ದರು. ಈಗಾಗಲೇ ಈ ಪ್ರಕರಣದ ವಿಚಾರಣೆಯನ್ನು ಮುಗಿಸಲಾಗಿದೆ.
ವಿನೇಶ್ ಫೋಗಟ್ ಅವರು ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ವಿಜೇತ ಇನ್ನೋರ್ವ ಕುಸ್ತಿಪಟು ಅಮನ್ ಸೆಹ್ರಾವತ್ ಜೊತೆಗೆ ಮಂಗಳವಾರ ಬೆಳಗ್ಗೆ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ತೀರ್ಪಿಗಾಗಿ ಕಾಯುತ್ತಿದ್ದಾರೆ.